ಮುಂಬೈ: ಟೀಂ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ವಿರಾಟ್ ಕೊಹ್ಲಿ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಲೇ ಇವೆ.
ಕೊಹ್ಲಿ ರಾಜೀನಾಮೆ ನೀಡಲು ತಂಡದೊಳಗೆ ಅವರ ಹಿಡಿತ ಕಡಿಮೆಯಾಗಿರುವುದು ಕಾರಣ ಎಂದು ಈ ಹಿಂದೆ ವರದಿಯಾಗಿತ್ತು. ಇದಕ್ಕೆ ಪುಷ್ಠಿ ನೀಡುವಂತಹ ವರದಿಯೊಂದು ಈಗ ಬಂದಿದೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ತಂಡದ ಸಹ ಆಟಗಾರರು ಕೊಹ್ಲಿ ಮೇಲೆ ಅಸಮಾಧಾನಗೊಂಡಿದ್ದರು. ಕೊಹ್ಲಿಯ ಬದ್ಧತೆಯನ್ನು ಪ್ರಶ್ನಿಸಿದ್ದರು ಎನ್ನಲಾಗಿದೆ. ಇಷ್ಟೇ ಸಾಲದೆಂಬಂತೆ ಹಿರಿಯ ಆಟಗಾರರೊಬ್ಬರ ನೇತೃತ್ವದಲ್ಲಿ ಕೆಲವು ಸದಸ್ಯರು ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ಕೊಹ್ಲಿ ವಿರುದ್ಧ ದೂರು ನೀಡಿದ್ದರು ಎಂದು ವರದಿಯಾಗಿದೆ. ಇದೆಲ್ಲಾ ಅಸಮಾಧಾನಗಳ ಕಾರಣಕ್ಕೆ ಕೊಹ್ಲಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.