Publish Date: Thu, 12 Sep 2024 (11:20 IST)
Updated Date: Thu, 12 Sep 2024 (11:23 IST)
ದುಬೈ: ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭಾರತೀಯರದ್ದೇ ಸಿಂಹಪಾಲು ಎಂದಾಗಿದೆ. ಇತ್ತೀಚೆಗೆ ಬಿಡುಗಡೆ ಮಾಡಿರುವ ಶ್ರೇಯಾಂಕಪಟ್ಟಿಯಲ್ಲಿ 6 ಭಾರತೀಯರು ಸ್ಥಾನ ಪಡೆದಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಮೂವರು ಭಾರತೀಯರು ಮತ್ತು ಬೌಲಿಂಗ್ ವಿಭಾಗದಲ್ಲಿ ಮೂವರು ಭಾರತೀಯರಿದ್ದಾರೆ. ಟೆಸ್ಟ್ ನಂ.1 ಬೌಲರ್ ಆಗಿ ರವಿಚಂದ್ರನ್ ಅಶ್ವಿನ್ ಮುಂದುವರಿದಿದ್ದಾರೆ. ಉಳಿದಂತೆ ಯಾವೆಲ್ಲಾ ಆಟಗಾರರು ಟಾಪ್ 10 ರೊಳಗೆ ಸ್ಥಾನ ಪಡೆದಿದ್ದಾರೆ ನೋಡಿ.
ಟೆಸ್ಟ್ ಬ್ಯಾಟರ್ ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ನ ಜೋ ರೂಟ್ ನಂ.1 ಬ್ಯಾಟಿಗರಾಗಿದ್ದರೆ ಎರಡನೇ ಸ್ಥಾನದಲ್ಲಿ ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ಇದ್ದಾರೆ.
ಬ್ಯಾಟರ್ ಗಳ ಪಟ್ಟಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ 5 ನೇ ಸ್ಥಾನದಲ್ಲಿದ್ದರೆ ಇನ್ನೊಬ್ಬ ಆರಂಭಿಕ ಯಶಸ್ವಿ ಜೈಸ್ವಾಲ್ 6 ಮತ್ತು ವಿರಾಟ್ ಕೊಹ್ಲಿ 7 ನೇ ಸ್ಥಾನದಲ್ಲಿದ್ದಾರೆ. ಬೌಲರ್ ಗಳ ಪಟ್ಟಿಯಲ್ಲಿ ಆರ್ ಅಶ್ವಿನ್ ನಂ.1 ಸ್ಥಾನದಲ್ಲಿದ್ದರೆ, ಜಸ್ಪ್ರೀತ್ ಬುಮ್ರಾ 3 ಮತ್ತು ರವೀಂದ್ರ ಜಡೇಜಾ 7 ನೇ ಸ್ಥಾನದಲ್ಲಿದ್ದಾರೆ. ಇದರೊಂದಿಗೆ ಐಸಿಸಿ ಶ್ರೇಯಾಂಕದಲ್ಲಿ ಭಾರತೀಯರದ್ದೇ ಸಿಂಹಪಾಲಾಗಿದೆ.