Publish Date: Mon, 25 Feb 2019 (09:27 IST)
Updated Date: Mon, 25 Feb 2019 (09:28 IST)
ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಕೈಗೆ ಕಪ್ಪು ಪಟ್ಟಿ ಧರಿಸಿ ಆಡಿದ್ದಾರೆ.
ಇತ್ತೀಚೆಗೆ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ಸಿಆರ್ ಪಿಎಫ್ ಯೋಧರ ಗೌರವಾರ್ಥ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಆಡಿದ್ದಾರೆ. ಫೆಬ್ರವರಿ 14 ರಂದು ಜೈಶೆ ಮೊಹಮ್ಮದ್ ಉಗ್ರರ ದಾಳಿಗೆ 40 ಯೋಧರು ಹುತಾತ್ಮರಾಗಿದ್ದರು.
ಈಗಾಗಲೇ ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಈ ಸರಣಿ ಗೆದ್ದು ಯೋಧರಿಗೆ ಅರ್ಪಿಸುವುದಾಗಿ ಹೇಳಿಕೊಂಡಿದ್ದರು. ಅದಲ್ಲದೆ, ಶಿಖರ್ ಧವನ್, ಶಮಿ ಮುಂತಾದ ಕ್ರಿಕೆಟಿಗರು ಯೋಧರ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ