Publish Date: Tue, 01 Jun 2021 (09:12 IST)
Updated Date: Tue, 01 Jun 2021 (09:13 IST)
ಮುಂಬೈ: ಇದೇ ತಿಂಗಳು ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸಿದೆ.
ಮುಂಬೈನಲ್ಲಿ ಬೀಡುಬಿಟ್ಟಿರುವ ಕ್ರಿಕೆಟಿಗರು ಒಳಾಂಗಣದಲ್ಲಿ ಕಠಿಣ ದೈಹಿಕ ಕಸರತ್ತಿನಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯಕ್ಕೆ ಬಿಸಿಸಿಐನ ಜೈವಿಕ ಸುರಕ್ಷಾ ವಲಯದಲ್ಲಿರುವ ಕ್ರಿಕೆಟಿಗರು ಕ್ವಾರಂಟೈನ್ ಅವಧಿ ಮುಗಿಸಿ ಇಂಗ್ಲೆಂಡ್ ನತ್ತ ಪ್ರಯಾಣ ಬೆಳೆಸಲಿದ್ದಾರೆ.
ಜೂನ್ 18 ರಂದು ನ್ಯೂಜಿಲೆಂಡ್ ವಿರುದ್ಧ ಸೌಥಾಂಪ್ಟನ್ ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆರಂಭವಾಗಲಿದೆ. ಇದಾದ ಬಳಿಕ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ.