ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಟ್ರಿನಿಡಾಡ್ ಗೆ ಬಂದಿಳಿದಿದೆ.
ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಓವಲ್ ಪಾರ್ಕ್ ನಲ್ಲಿ ಜುಲೈ 20 ರಿಂದ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಭಾಗಿಯಾಗಲು ಟೀಂ ಇಂಡಿಯಾ ಕ್ರಿಕೆಟಿಗರು ಆಗಮಿಸಿದ್ದಾರೆ.
ಇಂದಿನಿಂದ ಅಭ್ಯಾಸ ಆರಂಭಿಸಲಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ ಈ ಪಂದ್ಯವನ್ನೂ ಅದೇ ರೀತಿ ಗೆಲ್ಲುವ ವಿಶ್ವಾಸದಲ್ಲಿ ಟೀಂ ಇಂಡಿಯಾ ಇದೆ.