Publish Date: Fri, 29 Sep 2023 (17:24 IST)
Updated Date: Fri, 29 Sep 2023 (17:26 IST)
ಗುವಾಹಟಿ: ಐಸಿಸಿ ಏಕದಿನ ವಿಶ್ವಕಪ್ ನ ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭಾಗಿಯಾಗಲು ಟೀಂ ಇಂಡಿಯಾ ಗುವಾಹಟಿಗೆ ಬಂದಿಳಿದಿದೆ.
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾಗೆ ಗುವಾಹಟಿಯಲ್ಲಿ ಸಾಂಪ್ರದಾಯಿಕವಾಗಿ ಶಾಲು ಹೊದೆಸಿ, ತಿಲಕವಿಟ್ಟು ಸ್ವಾಗತಿಸಲಾಯಿತು. ಮೊನ್ನೆಯಷ್ಟೇ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಮುಗಿಸಿದ್ದ ಟೀಂ ಇಂಡಿಯಾ ನೇರವಾಗಿ ಗುವಾಹಟಿಗೆ ಬಂದಿಳಿದಿದೆ.
ನಾಳೆ ಅಪರಾಹ್ನ ಇಂಗ್ಲೆಂಡ್ ವಿರುದ್ಧ ಭಾರತ ಮೊದಲ ಅಭ್ಯಾಸ ಪಂದ್ಯವಾಡಲಿದೆ. ಇಂಗ್ಲೆಂಡ್ ಈಗಾಗಲೇ ಇಲ್ಲಿಗೆ ಬಂದಿಳಿದಿದೆ.