ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಕೊನೆಯ ಲೀಗ್ ಪಂದ್ಯ ಮುಗಿಸಿಕೊಂಡು ಟೀಂ ಇಂಡಿಯಾ ಮುಂಬೈಗೆ ಮರಳಿದೆ.
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಬುಧವಾರ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.
ರೋಹಿತ್ ಶರ್ಮಾ ಸೇರಿದಂತೆ ಭಾರತೀಯ ಕ್ರಿಕೆಟಿಗರೆಲ್ಲರೂ ಜೊತೆಯಾಗಿ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮಾತ್ರ ಪ್ರತ್ಯೇಕವಾಗಿ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.