ಏಕದಿನ ಇತಿಹಾಸದಲ್ಲೇ ಅತೀ ದೊಡ್ಡ ಗೆಲುವು: ಟೀಂ ಇಂಡಿಯಾ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

Webdunia
ಸೋಮವಾರ, 16 ಜನವರಿ 2023 (08:20 IST)
Photo Courtesy: Twitter
ತಿರುವನಂತರಪುರಂ: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಬರೋಬ್ಬರಿ 317 ರನ್ ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಹಾಗೂ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಮಾಡಿದ್ದಾರೆ.

ಮೂರನೇ ಏಕದಿನ ಪಂದ್ಯವನ್ನು ಗೆದ್ದ ಟೀಂ ಇಂಡಿಯಾ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿತು. ಏಕದಿನ ಇತಿಹಾಸದಲ್ಲೇ ಭಾರತಕ್ಕೆ ಇದು ಅತೀ ದೊಡ್ಡ ಅಂತರದ ಗೆಲುವಾಗಿದೆ. ಅಲ್ಲದೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 300 ಪ್ಲಸ್ ರನ್ ಅಂತರದಲ್ಲಿ ಗೆಲುವು ಕಂಡ ವಿಶ್ವದ ಮೊದಲ ತಂಡ ಎಂಬ ದಾಖಲೆ ಭಾರತದ್ದಾಗಿದೆ. ಮೊದಲು ಬ್ಯಾಟಿಂಗ್ ಮಾಡಡಿದ್ದ ಟೀಂ ಇಂಡಿಯಾ 390 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಲಂಕಾ ಕೇವಲ 73 ರನ್ ಗಳಿಗೆ ಆಲೌಟ್ ಆಯಿತು.

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಶುಬ್ನಂ ಗಿಲ್ ಶತಕ ಸಿಡಿಸಿದ್ದರು. ಕೊಹ್ಲಿಗೆ ಇದು 74 ನೇ ಅಂತಾರಾಷ್ಟ್ರೀಯ ಶತಕವಾಗಿತ್ತು. ಶ್ರೀಲಂಕಾ ವಿರುದ್ಧ 10 ನೇ ಶತಕ. ಈ ಮೂಲಕ ಲಂಕಾ ವಿರುದ್ಧ ತವರಿನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಸಚಿನ್ ದಾಖಲೆಯನ್ನು ಹಿಂದಿಕ್ಕಿದರು. ಅಲ್ಲದೆ ಒಂದೇ ಎದುರಾಳಿಯ ವಿರುದ್ಧ ಗರಿಷ್ಠ (21) ಶತಕ ಸಿಡಿಸಿದ ದಾಖಲೆ ಮಾಡಿದರು. ಕೊಹ್ಲಿ ಈಗ ಏಕದಿನ ಪಂದ್ಯಗಳಲ್ಲಿ ಗರಿಷ್ಠ ರನ್ ಗಳಿಸಿದ ಆಲ್‍ ಟೈಮ್ ಆಟಗಾರರ ಲಿಸ್ಟ್ ನಲ್ಲಿ ಐದನೇ ಸ್ಥಾನಕ್ಕೆ ಬಡ್ತಿ ಪಡೆದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs ENGW: ಲಾರ್ಡ್ಸ್ ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ

ಟೀಂ ಇಂಡಿಯಾ ಹುಡುಗರಿಗಿಂತ ಹುಡುಗಿಯರ ಟೀಂ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

CSK: ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಸ್ಥಾನದಿಂದ ಸ್ಟೀಫನ್ ಫ್ಲೆಮಿಂಗ್ ಗೆ ಕೊಕ್

ENG VS IND Test: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾಳಿಂದ ಹೊಸ ರೆಕಾರ್ಡ್‌

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ಮುಂದಿನ ಸುದ್ದಿ
Show comments