ಭಾರತ-ವಿಂಡೀಸ್ ಟಿ20: ಟೀಂ ಇಂಡಿಯಾಕ್ಕೆ 110 ರನ್ ಗಳ ಗುರಿ

ಭಾನುವಾರ, 4 ನವೆಂಬರ್ 2018 (20:48 IST)
ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸೀ ವಿಂಡೀಸ್ ಮೊದಲು ಬ್ಯಾಟಿಂಗ್ ಮಾಡಿ ಟೀಂ ಇಂಡಿಯಾಕ್ಕೆ 110 ರನ್ ಗಳ ಗೆಲುವಿನ ಗುರಿ ನೀಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ನಿಗದಿತ 20 ಓವರ್ ಗಳಲ್ಲಿ ಕೇವಲ 8 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಲಷ್ಟೇ ಶಕ್ತವಾಯಿತು.ಭಾರತದ ಪರ ಕುಲದೀಪ್ ಯಾದವ್ 3 ವಿಕೆಟ್ ಪಡೆದರೆ ಉಳಿದೆಲ್ಲಾ ಬೌಲರ್ ಗಳೂ ತಲಾ 1 ವಿಕೆಟ್ ಕಬಳಿಸಿದರು.

ವಿಂಡೀಸ್ ಪರ ಫಬಿಯಾನ್ ಅಲೆನ್ 27 ರನ್ ಗಳಿಸಿದ್ದೇ ದೊಡ್ಡ ಮೊತ್ತವಾಯಿತು. ಮುಖ್ಯವಾಗಿ ಮಧ್ಯಮ ಕ್ರಮಾಂಕದಲ್ಲಿ ಕುಲದೀಪ್ ಯಾದವ್ ಸತತವಾಗಿ ವಿಕೆಟ್ ಕೀಳಿದ್ದರಿಂದ ವಿಂಡೀಸ್ ಗೆ ಮರ್ಮಾಘಾತವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಭಾರತ-ವಿಂಡೀಸ್ ಟಿ20: ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ