Publish Date: Sun, 02 Feb 2020 (12:52 IST)
Updated Date: Sun, 02 Feb 2020 (12:53 IST)
ಬೇ ಓವಲ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದನೇ ಟಿ20 ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿಗೇ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಶರ್ಮಾ ಇಂದು ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಇತ್ತೀಚೆಗಿನ ವರದಿ ಬಂದಾಗ ಆರಂಭದಲ್ಲಿಯೇ ಸಂಜು ಸ್ಯಾಮ್ಸನ್ ವಿಕೆಟ್ ಕಳೆದುಕೊಂಡಿದ್ದು ರೋಹಿತ್ ಶರ್ಮಾ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ 3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 25 ರನ್ ಗಳಿಸಿದೆ.
ಉಳಿದಂತೆ ಭಾರತ ತಂಡದ ಕಳೆದ ಪಂದ್ಯದಲ್ಲಿ ಆಡಿದ ಯುವಪಡೆಯನ್ನೇ ಕಣಕ್ಕಿಳಿಸಿದೆ. ಈ ಪಂದ್ಯವನ್ನೂ ಭಾರತ ಗೆದ್ದರೆ ಸರಣಿ ಕ್ಲೀನ್ ಸ್ವೀಪ್ ಆಗಲಿದೆ.