Publish Date: Fri, 15 Feb 2019 (09:24 IST)
Updated Date: Fri, 15 Feb 2019 (09:26 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ ಮಾಡಲಿದ್ದು, ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳುವ ನಿರೀಕ್ಷೆಯಿದೆ.
ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದ ಬಳಿಕ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಕೊಹ್ಲಿ ಇದೀಗ ಮರಳಿ ತಂಡ ಕೂಡಿಕೊಳ್ಳುವ ನಿರೀಕ್ಷೆಯಿದೆ. ಆದರೆ ಕಿವೀಸ್ ವಿರುದ್ಧ ತಂಡವನ್ನು ಮುನ್ನಡೆಸಿದ್ದ ರೋಹಿತ್ ಶರ್ಮಾಗೆ ವಿಶ್ರಾಂತಿ ಸಿಗುವ ಸಾಧ್ಯತೆಯಿದೆ.
ಇನ್ನು, ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್, ಅಜಿಂಕ್ಯಾ ರೆಹಾನೆ ತಂಡಕ್ಕೆ ಮರಳುವ ಸಾಧ್ಯತೆಯಿದೆ. ಇವರಲ್ಲದೆ, ಬೌಲಿಂಗ್ ವಿಭಾಗದಲ್ಲಿ ಖಲೀಲ್ ಅಹಮ್ಮದ್, ಜಯದೇವ್ ಉನಾದ್ಕಟ್ ನಡುವೆ ಪೈಪೋಟಿಯಿದೆ. ಇನ್ನು, ಕೊಹ್ಲಿ ಜತೆಗೆ ವಿಶ್ರಾಂತಿಯಲ್ಲಿದ್ದ ವೇಗಿ ಜಸ್ಪ್ರೀತ್ ಬುಮ್ರಾರನ್ನು ಮರಳಿ ತಂಡಕ್ಕೆ ಕರೆಸಿಕೊಳ್ಳುವ ನಿರೀಕ್ಷೆಯಿದೆ. ಯಾರೆಲ್ಲಾ ಔಟ್, ಯಾರೆಲ್ಲಾ ಇನ್ ಎನ್ನುವ ಅಧಿಕೃತ ಮಾಹಿತಿ ಸದ್ಯದಲ್ಲೇ ಸಿಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ