ನ್ಯೂಜಿಲೆಂಡ್ ಮುಂದೆ ರನ್ ಗುಡ್ಡೆ ಹಾಕಿದ ಟೀಂ ಇಂಡಿಯಾ

Webdunia
ಬುಧವಾರ, 5 ಫೆಬ್ರವರಿ 2020 (11:27 IST)
ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅತಿಥೇಯ ಬೌಲರ್ ಗಳನ್ನು ಬೆಂಡಾಡಿ 348 ರನ್ ಗಳ ಬೃಹತ್ ಗೆಲುವಿನ ಗುರಿ ನೀಡಿದೆ.


ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಪರ ಎಲ್ಲಾ ಬ್ಯಾಟ್ಸ್ ಮನ್ ಗಳಿಂದಲೂ ಉತ್ತಮ ಜತೆಯಾಟವೇ ಬಂತು. ಆರಂಭಿಕರಾಗಿ ಇದೇ ಮೊದಲ ಬಾರಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್, ಪೃಥ್ವಿ ಶಾ ನಿಧಾನದ ಆದರೆ ಭದ್ರ ಅಡಿಪಾಯ ಹಾಕಿಕೊಟ್ಟರು. ಆದರೆ ಶಾ 20, ಮಯಾಂಕ್ 32 ರನ್ ಗಳಿಸಿ ಔಟಾದರು.

ಇದಾದ ಬಳಿಕ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಐಯರ್ ಮಧ‍್ಯಮ ಕ್ರಮಾಂಕದಲ್ಲಿ ಭದ್ರ ಬುನಾದಿ ಹಾಕಿದರು. ಕೊಹ್ಲಿ 51 ರನ್ ಗಳಿಸಿ ಔಟಾದರೆ ಶ್ರೇಯಸ್ ಏಕದಿನ ಪಂದ್ಯದಲ್ಲಿ ಚೊಚ್ಚಲ ಶತಕ (103) ಸಿಡಿಸಿ ಔಟಾದರು. ಇವರ ಬುನಾದಿ ಮೇಲೆ ನಿಂತ ಕೆಎಲ್ ರಾಹುಲ್ ಸಿಡಿಬಡಿಯ 88 ರನ್ ಗಳಿಸಿ ಮೊತ್ತ 340 ದಾಟಲು ನೆರವಾದರು. ರಾಹುಲ್ ಕೇವಲ 63 ಎಸೆತಗಳಲ್ಲಿ 88 ರನ್ ಗಳಿಸಿದರು. ಇನ್ನು ಕೇದಾರ್ ಜಾಧವ್ ಕೇವಲ 15 ಎಸೆತಗಳಲ್ಲಿ 26 ರನ್ ಗಳಿಸಿ ತಕ್ಕ ಸಾಥ್ ನೀಡಿದರು. ಇದರಿಂದಾಗಿ ಭಾರತ ನಿಗದಿತ 50 ಓವರ್ ಗಳಲ್ಲಿ ಭಾರತ 4 ವಿಕೆಟ್ ನಷ್ಟಕ್ಕೆ 347 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments