Publish Date: Tue, 23 Jan 2024 (12:00 IST)
Updated Date: Tue, 23 Jan 2024 (12:02 IST)
ಹೈದರಾಬಾದ್: ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಂ ಇಂಡಿಯಾ ಅಭ್ಯಾಸ ಆರಂಭಿಸಿದೆ.
ಜನವರಿ 25 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಇದಕ್ಕಾಗಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಹೈದರಾಬಾದ್ ಗೆ ಬಂದಿಳಿದಿದೆ.
ಹೈದರಾಬಾದ್ ಗೆ ಬಂದ ತಕ್ಷಣವೇ ರೋಹಿತ್ ಪಡೆ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ನಿನ್ನೆ ಲಘು ವ್ಯಾಯಾಮ, ಡ್ರಿಲ್ಸ್ ಮಾಡಲಾಗಿದೆ. ಇಂದಿನಿಂದ ಬ್ಯಾಟಿಂಗ್ ಮತ್ತು ಬೌಲಿಂಗ್ ಅಭ್ಯಾಸ ಆರಂಭವಾಗಲಿದೆ. ರೋಹಿತ್, ಶುಬ್ಮನ್ ಗಿಲ್, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್ ಸೇರಿದಂತೆ ಪ್ರಮುಖ ಆಟಗಾರರು ಅಭ್ಯಾಸದಲ್ಲಿ ಭಾಗಿಯಾಗಿದ್ದಾರೆ.
ಟೀಂ ಇಂಡಿಯಾ ಪ್ರಮುಖ ಆಟಗಾರ ವಿರಾಟ್ ಕೊಹ್ಲಿ ಕೌಟುಂಬಿಕ ಕಾರಣಗಳಿಂದಾಗಿ ಮೊದಲ ಎರಡು ಟೆಸ್ಟ್ ಪಂದ್ಯ ಆಡುತ್ತಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ಯಾರನ್ನು ಆಡಿಸಬೇಕು ಎಂಬ ಜಿಜ್ಞಾಸೆ ನಾಯಕ ರೋಹಿತ್ ರದ್ದಾಗಿದೆ.