Select Your Language

Notifications

webdunia
webdunia
webdunia
webdunia

ಇಂಗ್ಲೆಂಡ್ ಮೇಲೆ ಬೌಲರ್ ಗಳ ಬಳಿಕ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳ ಅಟ್ಯಾಕ್

webdunia
ಗುರುವಾರ, 5 ಆಗಸ್ಟ್ 2021 (09:05 IST)
ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ.


ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ಟೀಂ ಇಂಡಿಯಾ ವೇಗಿಗಳ ದಾಳಿಗೆ ತತ್ತರಿಸಿ 183 ರನ್ ಗೆ ಆಲೌಟ್ ಆಯಿತು. ಭಾರತದ ಪರ ಜಸ್ಪ್ರೀತ್ ಬುಮ್ರಾ 4,  ಮೊಹಮ್ಮದ್ ಶಮಿ 3, ಶ್ರಾದ್ಧೂಲ್ ಠಾಕೂರ್ 2 ಮತ್ತು ಮೊಹಮ್ಮದ್ ಸಿರಾಜ್ 1 ವಿಕೆಟ್ ಕಬಳಿಸಿದರು. ಇಂಗ್ಲೆಂಡ್ ಪರ ನಾಯಕ ಜೋ ರೂಟ್ 64 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿರುವ ಭಾರತ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 21 ರನ್ ಗಳಿಸಿದೆ. ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ತಲಾ 9 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇಬ್ಬರೂ ತಾಳ್ಮೆಯ ಆಟವಾಡುತ್ತಿದ್ದು, ಇಂಗ್ಲೆಂಡ್ ವೇಗಿಗಳನ್ನು ಎಚ್ಚರಿಕೆಯಿಂದ ನಿಭಾಯಿಸುತ್ತಾ ಭದ್ರ ಬುನಾದಿ ಕಟ್ಟಿಕೊಡಲು ಪ್ರಯತ್ನ ನಡೆಸುತ್ತಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

41 ವರ್ಷಗಳ ಬಳಿಕ ಒಲಿಂಪಿಕ್ ಮೆಡಲ್ ಗೆದ್ದ ಭಾರತ ಹಾಕಿ ತಂಡ