Publish Date: Wed, 25 Jul 2018 (09:37 IST)
Updated Date: Wed, 25 Jul 2018 (09:39 IST)
ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ಆಗಸ್ಟ್ ನಲ್ಲಿ ನಡೆಯಲಿರುವ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಆಟಗಾರರು ಭಾರತ ಬಿಟ್ಟು ಇಂಗ್ಲೆಂಡ್ ಗೆ ಹಾರಿದ್ದಾರೆ.
ಚೇತೇಶ್ವರ ಪೂಜಾರ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ರವೀಂದ್ರ ಜಡೇಜಾ ಇಂಗ್ಲೆಂಡ್ ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಜಸ್ಪ್ರೀತ್ ಬುಮ್ರಾ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಪ್ರಕಟಿಸಿದ್ದಾರೆ.
ಏಕದಿನ ಸರಣಿ ಸೋತಿರುವ ಟೀಂ ಇಂಡಿಯಾ ಪ್ರತಿಷ್ಠೆ ಉಳಿಸಿಕೊಳ್ಳಲು ಟೆಸ್ಟ್ ಸರಣಿ ಗೆಲ್ಲಲೇಬೆಕಾಗಿದೆ. ಉಳಿದ ಆಟಗಾರರೆಲ್ಲರೂ ಈಗಾಗಲೇ ಇಂಗ್ಲೆಂಡ್ ನಲ್ಲಿದ್ದಾರೆ. ಇವರಲ್ಲಿ ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ಸರಣಿ ಮುಗಿದ ಬಳಿಕವೂ ಅಲ್ಲಿಯೇ ಇದ್ದು ಕೌಂಟಿ ಕ್ರಿಕೆಟ್ ನಲ್ಲಿ ಆಡಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.