Daily Horoscope

ಇಂದು ಸಂಜೆ ಭಾರತಕ್ಕೆ ವಿಮಾನವೇರಲಿದೆ ವಿಶ್ವ ವಿಜೇತ ಟೀಂ ಇಂಡಿಯಾ

Krishnaveni K
ಮಂಗಳವಾರ, 2 ಜುಲೈ 2024 (16:11 IST)
ಬಾರ್ಬಡೋಸ್: ಟಿ20 ವಿಶ್ವಕಪ್ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ವಿಶ್ವ ಚಾಂಪಿಯನ್ ಆಗಿರುವ ಟೀಂ ಇಂಡಿಯಾಕ್ಕೆ ತವರಿಗೆ ವಾಪಸಾಗಲು ಚಂಡಮಾರುತ ಅಡ್ಡಿಯಾಗಿದೆ.

ಬಾರ್ಬಡೋಸ್ ನಲ್ಲಿ ಬೆರಿಲ್ ಚಂಡಮಾರುತದಿಂದಾಗಿ ಕ್ರಿಕೆಟಿಗರು ಹೋಟೆಲ್ ರೂಂನಲ್ಲಿಯೇ ಬಂಧಿಯಾಗಿದ್ದಾರೆ. ಹೊರಗೆ ಓಡಾಡಲೂ ಆಗದಂತಹ ಪರಿಸ್ಥಿತಿಯಿದೆ. ಬಾರ್ಬಡೋಸ್ ನಲ್ಲಿ ಚಂಡಮಾರುತದಿಂದಾಗಿ ತುರ್ತು ಪರಿಸ್ಥಿತಿ ಹೇರಲಾಗಿದ್ದು, ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು.

ಹೀಗಾಗಿ ಟೀಂ ಇಂಡಿಯಾ ವಿಶ್ವಕಪ್ ಗೆದ್ದು ಎರಡು ದಿನವಾದರೂ ವಿಂಡೀಸ್ ನಿಂದ ಭಾರತಕ್ಕೆ ಮರಳಲು ಸಾಧ್ಯವಾಗಿರಲಿಲ್ಲ. ರೋಹಿತ್ ಶರ್ಮಾ ವಿಶ್ವಕಪ್ ಜೊತೆಗೆ ಫೋಟೋ ಶೂಟ್ ನಲ್ಲಿ ಭಾಗಿಯಾಗಿದ್ದು ಬಿಟ್ಟರೆ ಬಹುತೇಕ ಕ್ರಿಕೆಟಿಗರು ಹೋಟೆಲ್ ರೂಂನಲ್ಲಿಯೇ ಕಾಲ ಕಳೆದಿದ್ದಾರೆ.

ಇಂದು ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದ್ದು, ಟೀಂ ಇಂಡಿಯಾ ಕ್ರಿಕೆಟಿಗರು ಇಂದು ಸಂಜೆ ಭಾರತದತ್ತ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ. ನಾಳೆ ಟೀಂ ಇಂಡಿಯಾ ಕ್ರಿಕೆಟಿಗರು ಭಾರತಕ್ಕೆ ತಲುಪುವ ನಿರೀಕ್ಷೆಯಿದೆ. ವಿಶ್ವ ವಿಜೇತ ತಂಡವನ್ನು ಎದುರಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments