Publish Date: Thu, 16 Dec 2021 (09:30 IST)
Updated Date: Thu, 16 Dec 2021 (09:43 IST)
ಮುಂಬೈ: ದ.ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಆಡಲಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಕೊರೋನಾದಿಂದ ಸುರಕ್ಷಿತವಾಗಿರಲು ಅಲ್ಲಿನ ಕ್ರಿಕೆಟ್ ಮಂಡಳಿ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ.
ಟೀಂ ಇಂಡಿಯಾ ಕ್ರಿಕೆಟಿಗರು ಇಲ್ಲಿ ಕೇವಲ ಒಂದು ದಿನ ಕ್ವಾರಂಟೈನ್ ಗೊಳಗಾಗಲಿದ್ದಾರೆ. ಸಾಮಾನ್ಯವಾಗಿ ವಿದೇಶದಲ್ಲಿ ಕ್ರಿಕೆಟಿಗರಿಗೆ ಐಷಾರಾಮಿ ಹೋಟೆಲ್ ನಲ್ಲಿ ಉಳಕೊಳ್ಳುವ ವ್ಯವಸ್ಥೆ ಮಾಡಲಾಗುತ್ತದೆ.
ಆದರೆ ಕಾಮನಬಿಲ್ಲಿನ ನಾಡಿನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಐಷಾರಾಮಿ ರೆಸಾರ್ಟ್ ನಲ್ಲಿ ಬಯೋ ಬಬಲ್ ವಾತಾವರಣ ಸೃಷ್ಟಿಸಲಾಗಿದೆ. ಇಲ್ಲಿಯೇ ಸರಣಿಯುದ್ಧಕ್ಕೂ ಕ್ರಿಕೆಟಿಗರು ಉಳಿದುಕೊಳ್ಳಲಿದ್ದಾರೆ. ಇಂದು ಸಂಜೆ ಟೀಂ ಇಂಡಿಯಾ ಕ್ರಿಕೆಟಿಗರು ಆಫ್ರಿಕಾ ನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.