Publish Date: Wed, 11 Mar 2026 (10:51 IST)
Updated Date: Wed, 11 Mar 2026 (10:54 IST)
ನವದೆಹಲಿ: ಟಿ20 ವಿಶ್ವಕಪ್ 2026 ಗೆದ್ದ ಟೀಂ ಇಂಡಿಯಾ ಪ್ರಧಾನಿ ಮೋದಿಯವರನ್ನು ಭೇಟಿಯಾಗಲ್ವಾ, ವಿಕ್ಟರಿ ಪೆರೇಡ್ ಇಲ್ವಾ ಎಂಬ ಅನುಮಾನಗಳಿಗೆ ಇಲ್ಲಿದೆ ಉತ್ತರ.
ಭಾನುವಾರ ಟೀಂ ಇಂಡಿಯಾ ಟಿ20 ವಿಶ್ವಕಪ್ ಫೈನಲ್ ಪಂದ್ಯ ಗೆದ್ದು ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿತ್ತು. ಈ ಹಿಂದೆ ಟಿ20 ವಿಶ್ವಕಪ್ ಗೆದ್ದಾಗ, ಮಹಿಳೆಯರು ಏಕದಿನ ವಿಶ್ವಕಪ್ ಗೆದ್ದಾಗ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿಸಲಾಗಿತ್ತು. ಟಿ20 ವಿಶ್ವಕಪ್ 2024 ಗೆದ್ದ ಬಳಿಕ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾಗೆ ಮುಂಬೈನಲ್ಲಿ ವಿಕ್ಟರಿ ಪೆರೇಡ್ ಆಯೋಜಿಸಲಾಗಿತ್ತು.
ಇದೀಗ ಈ ಬಾರಿ ಟಿ20 ವಿಶ್ವಕಪ್ ಗೆದ್ದ ತಂಡವನ್ನೂ ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ನಾಳೆ ಅಥವಾ ನಾಡಿದ್ದು ಪ್ರಧಾನಿ ಮೋದಿ ನಿವಾಸದಲ್ಲಿ ಟಿ20 ವಿಶ್ವಕಪ್ ವಿಜೇತರಿಗೆ ಆತಿಥ್ಯ ಏರ್ಪಡಿಸಲಾಗಿದೆ ಎನ್ನಲಾಗಿದೆ.
ಇನ್ನು, ಪ್ರಧಾನಿ ಮೋದಿ ಭೇಟಿ ಬಳಿಕ ಟೀಂ ಇಂಡಿಯಾಗೆ ವಿಕ್ಟರಿ ಪೆರೇಡ್ ಕೂಡಾ ಆಯೋಜಿಸಲಾಗುತ್ತದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಂದಿಲ್ಲ. ಆದರೆ ದೆಹಲಿಯಲ್ಲಿ ಕಾರ್ಯಕ್ರಮವೊಂದು ಆಯೋಜನೆಯಾಗಿದೆ ಎಂದು ಕ್ರಿಕೆಟಿಗ ಸಂಜು ಸ್ಯಾಮ್ಸನ್ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು.