Publish Date: Wed, 24 Oct 2018 (13:08 IST)
Updated Date: Wed, 24 Oct 2018 (13:10 IST)
ವಿಶಾಖಪಟ್ಟಣ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಈ ಪಂದ್ಯದಲ್ಲಿ ಭಾರತ ಒಂದು ಬದಲಾವಣೆ ಮಾಡಿಕೊಂಡಿದ್ದು ಖಲೀಲ್ ಮೊಹಮ್ಮದ್ ಬದಲಿಗೆ ಕುಲದೀಪ್ ಯಾದವ್ ಗೆ ಸ್ಥಾನ ನೀಡಿದೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅತೀ ವೇಗವಾಗಿ 10 ಸಾವಿರ ರನ್ ಪೂರೈಸುವ ದಾಖಲೆ ಮಾಡುವ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.