Publish Date: Mon, 14 Aug 2017 (15:48 IST)
Updated Date: Mon, 14 Aug 2017 (15:54 IST)
ಪಲ್ಲೆಕೆಲೆ: ನಿರೀಕ್ಷೆಯಂತೇ ಟೀಂ ಇಂಡಿಯಾ ತೃತೀಯ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಮತ್ತು 171 ರನ್ ಗಳ ಬೃಹತ್ ಅಂತರದಿಂದ ಸೋಲಿಸಿ ಇತಿಹಾಸ ಸೃಷ್ಟಿಸಿದೆ.
ಇದರೊಂದಿಗೆ ಇದೇ ಮೊದಲ ಬಾರಿಗೆ ವಿದೇಶದಲ್ಲಿ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡ ದಾಖಲೆ ಮಾಡಿದೆ. ಮೊದಲ ಪ್ರಯತ್ನದಲ್ಲೇ ಕೊಹ್ಲಿ-ರವಿಶಾಸ್ತ್ರಿ ಜೋಡಿಗೆ ಭರ್ಜರಿ ಗೆಲುವು ಸಿಕ್ಕಿದೆ.
ದ್ವಿತೀಯ ಇನಿಂಗ್ಸ್ ನಲ್ಲಿ ಲಂಕಾ 181 ರನ್ ಗಳಿಗೆ ಆಲೌಟ್ ಆದರು. ಇದರೊಂದಿಗೆ ಭಾರತ ಸರಣಿಯನ್ನ 3-0 ಅಂತರದಿಂದ ಗೆಲುವು ಸಾಧಿಸಿತು. ಭಾರತದ ಪರ ರವಿಚಂದ್ರನ್ ಅಶ್ವಿನ್ ನಾಲ್ಕು ಹಾಗೂ ಮೊಹಮ್ಮದ್ ಶಮಿ 3 ವಿಕೆಟ್ ಕಿತ್ತರು.