ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ 59 ರನ್ ಗಳ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತು. ಆರಂಭಿಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಸ್ಪೋಟಕ ಆರಂಭ ನೀಡಿದರೆ ಬಳಿಕ ಮಧ‍್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್ ಸಿಡಿದು 44 ರನ್ ಗಳಿಸಿ ತಂಡಕ್ಕೆ ಆಧಾರವಾದರು. ಕೆಳ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಅಜೇಯ 30 ರನ್ ಸಿಡಿಸಿ ತಂಡಕ್ಕೆ ಉತ್ತಮ ಮೊತ್ತ ಗಳಿಸಲು ಸಹಾಯ ಮಾಡಿದರು.
ಈ ರನ್ ಚೇಸ್ ಮಾಡಿದ ವಿಂಡೀಸ್ ಭಾರತದ ಸಂಘಟಿತ ಬೌಲಿಂಗ್ ದಾಳಿ ಎದುರು ಶರಣಾಗಿ 19.1 ಓವರ್ ಗಳಲ್ಲಿ 132 ರನ್ ಗಳಿಗೆ ಆಲೌಟ್ ಆಯಿತು. ನಿಕಲಸ್ ಪೂರನ್ ಮತ್ತು ರೋವ್ಮಾನ್ ಪೊವೆಲ್ ತಲಾ 24 ರನ್ ಗಳಿಸಿದರು. ಭಾರತದ ಪರ ಅರ್ಷ್ ದೀಪ್ ಸಿಂಗ್ 3, ಆವೇಶ್ ಖಾನ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್ ತಲಾ 2 ವಿಕೆಟ್ ಕಬಳಿಸಿದರು. ಇದರೊಂದಿಗೆ ಸರಣಿ ಭಾರತದ ಪಾಲಾಗಿದೆ.