Publish Date: Sat, 06 Oct 2018 (15:50 IST)
Updated Date: Sat, 06 Oct 2018 (15:52 IST)
ರಾಜ್ ಕೋಟ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಮೂರೇ ದಿನದೊಳಗೆ ಇನಿಂಗ್ಸ್ ಅಂತರದಿಂದ ಗೆಲುವು ಸಾಧಿಸಿದೆ.
ಭಾರತ ನೀಡಿದ್ದ 645 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ್ದ ವಿಂಡೀಸ್ ಮೊದಲ ಇನಿಂಗ್ಸ್ ನಲ್ಲಿ 181 ರನ್ ಗಳಿಗೆ ಆಲೌಟ್ ಆಯಿತು. ಫಾಲೋ ಆನ್ ಪಡೆದ ದ್ವಿತೀಯ ಇನಿಂಗ್ಸ್ ಆರಂಭಿಸಿದ ವಿಂಡೀಸ್ 196 ರನ್ ಗಳಿಗೆ ಆಲೌಟ್ ಆಯಿತು.
ಇದರೊಂದಿಗೆ ಭಾರತ ಇನಿಂಗ್ಸ್ ಹಾಗೂ 272 ರನ್ ಗಳ ಬೃಹತ್ ಅಂತರದಿಂದ ಮೊದಲ ಟೆಸ್ಟ್ ಗೆದ್ದುಕೊಂಡಿತು. ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ಪೃಥ್ವಿ ಶಾ ಪಂದ್ಯ ಶ್ರೇಷ್ಟ ಪ್ರಶಸ್ತಿ ಪಡೆದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.