ಟೀಂ ಇಂಡಿಯಾ ಎದುರು ಸೋತರೂ ಐರ್ಲೆಂಡ್ ಖುಷಿ ಪಡಲು ಕಾರಣವಿತ್ತು!

Webdunia
ಗುರುವಾರ, 28 ಜೂನ್ 2018 (08:49 IST)
ಡುಬ್ಲಿನ್: ಟೀಂ ಇಂಡಿಯಾ ಆಂಗ್ಲರ ನಾಡಿನಲ್ಲಿ ಮೊದಲ ಪಂದ್ಯದಲ್ಲೇ ಶುಭಾರಂಭ ಮಾಡಿದೆ. ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯವನ್ನು 76 ರನ್ ಗಳಿಂದ ಗೆದ್ದು ಸರಣಿಯಲ್ಲಿ ಮುನ್ನಡೆ ಪಡೆದಿದೆ.
 

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಅಬ್ಬರಕ್ಕೆ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ರೋಹಿತ್ 61 ಎಸೆತಗಳಲ್ಲಿ 5 ಸಿಕ್ಸರ್ ಗಳೊಂದಿಗೆ 97 ರನ್ ಗಳಿಸಿ ಸ್ವಲ್ಪರದಲ್ಲೇ ಶತಕ ಮಿಸ್ ಮಾಡಿಕೊಂಡರು. ಧವನ್ ಆರಂಭದಿಂದಲೇ ಅಬ್ಬರಿಸಿ 45 ಎಸೆತಗಳಲ್ಲಿ 5 ಸಿಕ್ಸರ್ ಗಳೊಂದಿಗೆ 74 ರನ್ ಗಳಿಸಿ ಔಟಾದರು.

ಅದಾದ ಬಳಿಕ ಧೋನಿ, ರೈನಾ, ನಾಯಕ ವಿರಾಟ್ ಕೊಹ್ಲಿ ಕಳಪೆ ಮೊತ್ತಕ್ಕೆ ಔಟಾದರು. ಅದರಲ್ಲೂ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡಿ ಐರ್ಲೆಂಡ್ ಪಡೆ ದೊಡ್ಡ ಸಾಧನೆಯನ್ನೇ ಮಾಡಿತು. ಹೀಗಾಗಿ ಸೋಲಿನಲ್ಲೂ ಅದು ಸಂಭ್ರಮಿಸುವುದಕ್ಕೆ ಇದೇ ಕಾರಣವಾಯಿತು.

ನಂತರ ಮೊತ್ತ ಬೆನ್ನತ್ತಿದ ಅತಿಥೇಯರಿಗೆ ಭಾರತದ ಸ್ಪಿನ್ ಜೋಡಿ ಕುಲದೀಪ್ ಯಾದವ್ (3 ವಿಕೆಟ್) ಮತ್ತು ಯಜುವೇಂದ್ರ ಚಾಹಲ್ (4 ವಿಕೆಟ್) ಕಾಡಿತು. ಇವರಿಬ್ಬರ ಸ್ಪಿನ್ ಮೋಡಿಗೆ ತತ್ತರಿಸಿದ ಕ್ರಿಕೆಟ್ ಶಿಶುಗಳು 9 ವಿಕೆಟ್ ನಷ್ಟಕ್ಕೆ ಕೇವಲ 132 ರನ್ ಗಳಿಸಲಷ್ಟೇ ಶಕ್ತರಾದರು. ಈ ಗೆಲುವಿನೊಂದಿಗೆ ಭಾರತ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

ಮುಂದಿನ ಸುದ್ದಿ
Show comments