Select Your Language

Notifications

webdunia
webdunia
webdunia
webdunia

ಏಷ್ಯಾ ಕಪ್: ಹಾಂಗ್ ಕಾಂಗ್ ವಿರುದ್ಧ ಗೆದ್ದ ಟೀಂ ಇಂಡಿಯಾ ಈಗ ಎ1

ಏಷ್ಯಾ ಕಪ್: ಹಾಂಗ್ ಕಾಂಗ್ ವಿರುದ್ಧ ಗೆದ್ದ ಟೀಂ ಇಂಡಿಯಾ ಈಗ ಎ1
ದುಬೈ , ಗುರುವಾರ, 1 ಸೆಪ್ಟಂಬರ್ 2022 (08:00 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಹಾಂಗ್ ಕಾಂಗ್ ವಿರುದ್ಧ 40 ರನ್ ಗಳ ಗೆಲುವು ಸಾಧಿಸಿದ ಟೀಂ ಇಂಡಿಯಾ ಎ1 ತಂಡವಾಗಿ ಸೂಪರ್ ಫೋರ್ ಹಂತಕ್ಕೇರಿದೆ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ವಿರಾಟ್‍ ಕೊಹ್ಲಿ-ಸೂರ್ಯಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್ ನಿಂದಾಗಿ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ 68 ರನ್ ಚಚ್ಚಿದರು. ಅವರ ಈ ಸಿಡಿಲಬ್ಬರದ ಬ್ಯಾಟಿಂಗ್ ನಲ್ಲಿ 6 ಸಿಕ್ಸರ್, 6 ಬೌಂಡರಿ ಸೇರಿದೆ. ಕೊಹ್ಲಿ 44 ಎಸೆತಗಳಲ್ಲಿ 59 ರನ್ ಗಳಿಸಿದರು. ಅದರಲ್ಲೂ ಸೂರ್ಯಕುಮಾರ್ ಕೊನೆಯ ಓವರ್ ನಲ್ಲೇ ನಾಲ್ಕು ಸಿಕ್ಸರ್ ಸಿಡಿಸಿ ಅಬ್ಬರಿಸಿದರು.

ಬಳಿಕ ಬ್ಯಾಟಿಂಗ್ ಮಾಡಿದ ಹಾಂಗ್ ಕಾಂಗ್ ಕೂಡಾ ಉತ್ತಮ ಪ್ರತಿರೋಧವೊಡ್ಡಿತು. 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಲಷ್ಟೇ ಶಕ್ತವಾಯಿತು. ಬಾಬರ್ ಹಯಾತ್ 41, ಕಿನ್ ಚಿತ್ ಶಾ 30, ಝೀಶಾನ್ ಅಲಿ 26 ರನ್ ಗಳಿಸಿದರು. ಅದರಲ್ಲೂ ಅರ್ಷ್ ದೀಪ್ ಸಿಂಗ್ 1 ವಿಕೆಟ್ ಕಬಳಿಸಿದರೂ 4 ಓವರ್ ಗಳ ಕೋಟಾದಲ್ಲಿ 44 ರನ್ ಬಿಟ್ಟುಕೊಟ್ಟರು! ಉಳಿದಂತೆ ಆವೇಶ್ ಖಾನ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಕಬಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯಾ ಕಪ್ ಕ್ರಿಕೆಟ್: ಭಾರತ-ಹಾಂಗ್ ಕಾಂಗ್ ನಡುವೆ ಎರಡನೇ ಪಂದ್ಯ