Daily Horoscope
✕

ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ

Webdunia
ಶನಿವಾರ, 21 ಜನವರಿ 2023 (18:33 IST)
Photo Courtesy: Twitter
ರಾಯ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೇ ತನ್ನದಾಗಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಕೇವಲ 108 ರನ್ ಗಳಿಗೆ ಆಲೌಟ್ ಆಯಿತು. ಈ ಸುಲಭ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾಗೆ ರೋಹಿತ್ ಶರ್ಮಾ, ಶುಬ್ನಂ ಗಿಲ್ ಮತ್ತೊಮ್ಮೆ ಉತ್ತಮ ಆರಂಭ ನೀಡಿದರು.

ರೋಹಿತ್ ಶರ್ಮಾ ಅರ್ಧಶತಕ ಗಳಿಸಿ ಮಿಂಚಿದರು. 50 ಎಸೆತ ಎದುರಿಸಿದ ಅವರು 51 ರನ್ ಗಳಿಸಿದ್ದಾಗ ಎಲ್ ಬಿ ಡಬ್ಲ್ಯು ಆಗಿ ಔಟಾದರು. ನಂತರ ಬಂದ ವಿರಾಟ್ ಕೊಹ್ಲಿ ಉತ್ತಮವಾಗಿ ಆಡಿದರೂ 11 ರನ್ ಗಳಿಸಿದ್ದಾಗ ಸ್ಟಂಪ್ ಔಟ್ ಆಗಿ ನಿರಾಸೆ ಅನುಭವಿಸಿದರು. ಆದರೆ ಮತ್ತೊಂದು ತುದಿಯಲ್ಲಿ ದೃಢವಾಗಿ ನಿಂತ ಶುಬ್ನಂ ಗಿಲ್ ಅಜೇಯ 40 ರನ್ ಗಳಿಸಿ ತಂಡಕ್ಕೆ ಗೆಲುವು ಕೊಡಿಸಿದರು. ಇಶಾನ್ ಕಿಶನ್ ಅಜೇಯ 8 ರನ್ ಗಳಿಸಿದರು. ಇದರೊಂದಿಗೆ ಟೀಂ ಇಂಡಿಯಾ 20.1 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 111 ರನ್ ಗಳಿಸಿ ಗೆಲುವು ಕಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ಬಿಗ್ ಶಾಕ್:ನಾಯಕತ್ವಕ್ಕೆ ಹರ್ಮನ್‌ಪ್ರೀತ್ ಕೌರ್ ದಿಢೀರ್ ರಾಜೀನಾಮೆ

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ಮುಂದಿನ ಸುದ್ದಿ
Show comments