Publish Date: Sun, 25 Sep 2022 (18:34 IST)
Updated Date: Sun, 25 Sep 2022 (18:35 IST)
ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಈ ಸರಣಿ ಈಗಾಗಲೇ 1-1 ರಿಂದ ಸಮಬಲಗೊಂಡಿದ್ದು, ಇಂದಿನ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ. ಕಳೆದ ಎರಡೂ ಪಂದ್ಯಗಳಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಿದ ತಂಡವೇ ಗೆದ್ದಿರುವುದು ವಿಶೇಷ.
ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಡುವ ಬಳಗಾದಲ್ಲಿ ಸಣ್ಣ ಬದಲಾವಣೆಯಿದೆ. ರಿಷಬ್ ಪಂತ್ ರನ್ನು ಆಡುವ ಬಳಗದಿಂದ ಹೊರಗಿಡಲಾಗಿದೆ. ಉಳಿದಂತೆ ತಂಡದಲ್ಲಿ ಹೆಚ್ಚಿನ ಬದಲಾವಣೆಯಿಲ್ಲ.