Publish Date: Thu, 14 Jul 2022 (17:08 IST)
Updated Date: Thu, 14 Jul 2022 (17:10 IST)
ಲಂಡನ್: ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಇಂದಿನ ಪಂದ್ಯಕ್ಕೆ ಶ್ರೇಯಸ್ ಅಯ್ಯರ್ ಸ್ಥಾನಕ್ಕೆ ವಿರಾಟ್ ಕೊಹ್ಲಿಗೆ ಸ್ಥಾನ ನೀಡಲಾಗಿದೆ. ಗಾಯದಿಂದ ಚೇತರಿಸಿಕೊಂಡಿರುವ ಕೊಹ್ಲಿ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ.
ಅತ್ತ ಇಂಗ್ಲೆಂಡ್ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಒಂದು ವೇಳೆ ಟೀಂ ಇಂಡಿಯಾ ಇಂದಿನ ಪಂದ್ಯ ಗೆದ್ದರೆ ಸರಣಿ ಕೈವಶವಾಗಲಿದೆ.