Publish Date: Sat, 20 Aug 2022 (20:47 IST)
Updated Date: Sat, 20 Aug 2022 (20:49 IST)
ಹರಾರೆ: ಭಾರತ ಮತ್ತು ಜಿಂಬಾಬ್ವೆ ನಡುವೆ ನಡೆದ ದ್ವಿತೀಯ ಏಕದಿನ ಪಂದ್ಯವನ್ನು 5 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಂಡಿದೆ.
ಜಿಂಬಾಬ್ವೆ ನೀಡಿದ್ದ 162 ರನ್ ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿತು. ಇಂದು ಆರಂಭಿಕರಾಗಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಕೇವಲ 1 ರನ್ ಗೆ ವಿಕೆಟ್ ಒಪ್ಪಿಸಿದರು. ಆದರೆ ನಂತರ ಜೊತೆಯಾದ ಶಿಖರ್ ಧವನ್-ಶುಬ್ನಂ ಗಿಲ್ ಜೋಡಿ ಉತ್ತಮ ಅಡಿಪಾಯ ಹಾಕಿಕೊಟ್ಟಿತು. ಈ ನಡುವೆ ತಲಾ 33 ರನ್ ಗಳಿಸಿ ಧವನ್, ಗಿಲ್ ಔಟಾದರು.
ಬಳಿಕ ಬಂದ ಸಂಜು ಸ್ಯಾಮ್ಸನ್ ಅಜೇಯ 43 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇನ್ನೊಂದೆಡೆ ದೀಪಕ್ ಹೂಡಾ 25 ರನ್ ಗಳ ಕೊಡುಗೆ ನೀಡಿದರು. ಇದರೊಂದಿಗೆ ಭಾರತ 25.4 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 167 ರನ್ ಗಳಿಸುವ ಮೂಲಕ ಪಂದ್ಯ ಗೆದ್ದುಕೊಂಡಿತು.