ಲಂಡನ್: ಭಾರತ ಮತ್ತು ಡರ್ಬಿಶೈರ್ ನಡುವಿನ ಟಿ20 ಅಭ್ಯಾಸ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ನೇತೃತ್ವದ ಟೀಂ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಡರ್ಬಿಶೈರ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತು. ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಿ ಈ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಗೆ ಟೀಂ ಇಂಡಿಯಾ ನಾಯಕತ್ವ ವಹಿಸಲಾಗಿತ್ತು. ಐರ್ಲೆಂಡ್ ವಿರುದ್ಧ ನಡೆದಿದ್ದ ಟಿ20 ಸರಣಿಯಲ್ಲಿ ಆಡಿದ್ದ ತಂಡವೇ ಈ ಪಂದ್ಯವಾಡಿದೆ.
150 ರನ್ ಚೇಸ್ ಮಾಡಲು ಹೊರಟ ಭಾರತಕ್ಕೆ ಸಂಜು ಸ್ಯಾಮ್ಸನ್ 38, ದೀಪಕ್ ಹೂಡಾ 59, ಸೂರ್ಯಕುಮಾರ್ ಯಾದವ್ 36 ರನ್ ಗಳ ಕೊಡುಗೆ ನೀಡಿದರು. ನಾಯಕ ದಿನೇಶ್ ಕಾರ್ತಿಕ್ ಅಜೇಯ 7 ರನ್ ಗಳಿಸಿದರು. ಇದರೊಂದಿಗೆ ಟೀಂ ಇಂಡಿಯಾ 16.4 ಓವರ್ ಗಳಲ್ಲೇ 3 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿತು.