ಸೈಂಟ್ ಕಿಟ್ಸ್: ಇಷ್ಟು ದಿನ ಫಾರ್ಮ್ ಗಾಗಿ ಕಿತ್ತಾಡುತ್ತಿದ್ದ ಸೂರ್ಯಕುಮಾರ್ ಯಾದವ್ ಸರಿಯಾದ ಟೈಮ್ ಗೆ ಫಾರ್ಮ್ ಕಂಡುಕೊಂಡಿದ್ದಾರೆ. ಇದರಿಂದಾಗಿ ಲಾಭವಾಗಿದ್ದು ಟೀಂ ಇಂಡಿಯಾಗೆ.
ಭಾರತ-ವೆಸ್ಟ್ ಇಂಡೀಸ್ ನಡುವೆ ಮೂರನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆಲ್ಲುವುದರೊಂದಿಗೆ ಸರಣಿಯಲ್ಲಿ ಮೇಲುಗೈ ಸಾಧಿಸಿತು. . ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಮೇಯರ್ಸ್ 73 ರನ್ ಗಳಿಸಿದರು. ಭಾರತದ ಪರ ಭುವನೇಶ್ವರ್ ಕುಮಾರ್ 2, ಹಾರ್ದಿಕ್ ಪಾಂಡ್ಯ, ಅರ್ಷ್ ದೀಪ್ ಸಿಂಗ್ ತಲಾ 1 ವಿಕೆಟ್ ಕಬಳಿಸಿದರು.
ಬಳಿಕ ಬ್ಯಾಟಿಂಗ್ ಮಾಡಿದ ಭಾರತ 19 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು. ರೋಹಿತ್ ಶರ್ಮಾ 11 ರನ್ ಗಳಿಸಿದ್ದಾಗ ಗಾಯಗೊಂಡು ನಿವೃತ್ತಿಯಾದರು. ಬಳಿಕ ಆರಂಭಿಕರಾಗಿ ಕಣಕ್ಕಿಳಿದಿದ್ದ ಸೂರ್ಯ ಕುಮಾರ್ ಯಾದವ್ ಜವಾಬ್ಧಾರಿಯುತ ಆಟವಾಡಿದರು. 44 ಎಸೆತಗಳಲ್ಲಿ 76 ರನ್ ಗಳಿಸಿದರು.ರಿಷಬ್ ಪಂತ್ 26 ಎಸೆತಗಳಲ್ಲಿ 33 ರನ್ ಗಳಿಸಿದರು.