Publish Date: Sun, 04 Nov 2018 (18:33 IST)
Updated Date: Sun, 04 Nov 2018 (18:35 IST)
ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆರಿಸಿಕೊಂಡಿದೆ.
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕರಾಗಿದ್ದಾರೆ. ಖಲೀಲ್ ಅಹಮ್ಮದ್ ಮತ್ತು ಕೃನಾಲ್ ಪಾಂಡ್ಯ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ.
ಏಕದಿನ ಪಂದ್ಯಗಳಲ್ಲಿ ಆಡುವ ಅವಕಾಶ ಸಿಗದ ಕೆಎಲ್ ರಾಹುಲ್ ಗೆ ಟಿ20 ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಸಿಕ್ಕಿದೆ. ರೋಹಿತ್ ಶರ್ಮಾ ಜತೆಗೆ ಶಿಖರ್ ಧವನ್ ಆರಂಭಿಕರಾಗಲಿದ್ದಾರೆ. ದಿನೇಶ್ ಕಾರ್ತಿಕ್ ವಿಕೆಟ್ ಕೀಪರ್ ಆಗಿರಲಿದ್ದು, ರಿಷಬ್ ಪಂತ್ ಗೂ ಅವಕಾಶ ಸಿಕ್ಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.