Publish Date: Thu, 14 Jun 2018 (09:09 IST)
Updated Date: Thu, 14 Jun 2018 (09:11 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.
ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನ ಟೆಸ್ಟ್ ಪಂದ್ಯವಾಡುತ್ತಿದ್ದು, ಟೀಂ ಇಂಡಿಯಾವೇ ಅದರ ಮೊದಲ ಎದುರಾಳಿ ಎನ್ನುವುದು ಈ ಪಂದ್ಯದ ವಿಶೇಶ.
ಭಾರತ ತಂಡದಲ್ಲಿ ಆರಂಭಿಕರಾಗಿ ಶಿಖರ್ ಧವನ್ ಮತ್ತು ಮುರಳಿ ವಿಜಯ್ ಕಣಕ್ಕಿಳಿಯಲಿದ್ದಾರೆ. ಇನ್ನೊಬ್ಬ ಸ್ಪೆಷಲಿಸ್ಟ್ ಆರಂಭಿಕ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ. ಆದರೆ ಇನ್ನೊಬ್ಬ ಕನ್ನಡಿಗ ಕರುಣ್ ನಾಯರ್ ಗೆ ಸ್ಥಾನ ಸಿಕ್ಕಿಲ್ಲ. ವಿಶೇಷವೆಂದರೆ ಈ ಪಂದ್ಯದಲ್ಲಿ ಕುಲದೀಪ್ ಯಾದವ್ ಗೆ ಸ್ಥಾನ ನೀಡಲಾಗಿಲ್ಲ. ಅನುಭವಿ ಸ್ಪಿನ್ ಜೋಡಿ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾಗೆ ಸ್ಥಾನ ನೀಡಲಾಗಿದೆ. ಇಶಾಂತ್ ಶರ್ಮಾ ಮತ್ತು ಉಮೇಶ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.