Publish Date: Mon, 29 Oct 2018 (13:03 IST)
Updated Date: Mon, 29 Oct 2018 (13:05 IST)
ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಾಲ್ಕನೇ ಏಕದಿನ ಪಂದ್ಯ ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ನಡೆಯುತ್ತಿದ್ದು, ಹಲವು ವರ್ಷಗಳ ಬಳಿಕ ಇಲ್ಲಿ ಪಂದ್ಯ ನಡೆಯುತ್ತಿರುವುದು ವಿಶೇಷವಾಗಿದೆ.
ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯದಲ್ಲಿ ಭಾರತ ಎರಡು ಬದಲಾವಣೆ ಮಾಡಿಕೊಂಡಿದ್ದು ರಿಷಬ್ ಪಂತ್ ಸ್ಥಾನಕ್ಕೆ ಕೇದಾರ್ ಜಾದವ್ ಮತ್ತು ಖಲೀಲ್ ಅಹಮ್ಮದ್ ಸ್ಥಾನಕ್ಕೆ ರವೀಂದ್ರ ಜಡೇಜಾಗೆ ಸ್ಥಾನ ನೀಡಲಾಗಿದೆ.
ಹಲವು ವರ್ಷಗಳ ನಂತರ ನಡೆಯುತ್ತಿರುವ ಏಕದಿನ ಪಂದ್ಯ ಇದಾಗಿರುವುದರಿಂದ ಲಾರ್ಡ್ಸ್ ಮತ್ತು ಕೋಲ್ಕೊತ್ತಾದ ಈಡನ್ ಗಾರ್ಡನ್ ನಂತೆ ಗಂಟೆ ಬಾರಿಸಿ ಪಂದ್ಯ ಆರಂಭಿಸಲಾಗುತ್ತಿದೆ. ಈ ಮೊದಲ ಗೌರವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪಾಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.