Select Your Language

Notifications

webdunia
webdunia
webdunia
webdunia

ದ.ಆಫ್ರಿಕಾ ಅಂತಿಮ ಏಕದಿನ: ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆ

ದ.ಆಫ್ರಿಕಾ ಅಂತಿಮ ಏಕದಿನ: ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆ
ಪಾರ್ಲ್ , ಭಾನುವಾರ, 23 ಜನವರಿ 2022 (13:42 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಕಳೆದ ಎರಡೂ ಪಂದ್ಯಗಳನ್ನು ಸೋತು ಸರಣಿ ಕಳೆದುಕೊಂಡಿರುವ ಭಾರತಕ್ಕೆ ಈ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ಅವಮಾನ ತಪ್ಪಿಸುವ ಗುರಿಯಿದೆ. ಈ ಕಾರಣಕ್ಕೆ ಇಂದಿನ ಪಂದ್ಯಕ್ಕೆ ಭಾರೀ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.

ಸೂರ್ಯಕುಮಾರ್ ಯಾದವ್, ಪ್ರಸಿದ್ಧ ಕೃಷ್ಣ, ಜಯಂತ್ ಯಾದವ್, ದೀಪಕ್ ಚಹರ್ ತಂಡದಲ್ಲಿ ಸ್ಥಾನ ಪಡೆದಿದ್ದು, ಕಳೆದ ಪಂದ್ಯಗಳನ್ನಾಡಿದ್ದ ವೆಂಕಟೇಶ್ ಐಯರ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಶ್ರಾದ್ಧೂಲ್ ಠಾಕೂರ್ ತಂಡದಿಂದ ಸ್ಥಾನ ಕಳೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ಐಪಿಎಲ್ 2022: ಫೆ. 12, 13 ಕ್ಕೆ ಬೆಂಗಳೂರಿನಲ್ಲಿ ಹರಾಜು