Publish Date: Fri, 16 Jul 2021 (09:10 IST)
Updated Date: Fri, 16 Jul 2021 (09:16 IST)
ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾದಲ್ಲಿ ಒಬ್ಬ ಆಟಗಾರನಿಗೆ ಕೊರೋನಾ ಸೋಂಕು ಕಾಣಸಿಕೊಂಡಿದೆ ಎಂದು ವರದಿಯಾಗಿತ್ತು. ಆ ಆಟಗಾರ ಯಾರು ಎಂಬುದು ಬಹಿರಂಗವಾಗಿದೆ.
ಫುಟ್ಬಾಲ್ ಪಂದ್ಯ ವೀಕ್ಷಿಸಲು ಹೋಗಿದ್ದ ಒಬ್ಬರಿಗೆ ಕೊರೋನಾ ಕಾಣಿಸಿಕೊಂಡಿದೆ ಎಂದು ವರದಿಯಾಗಿತ್ತು. ಆ ಕ್ರಿಕೆಟಿಗ ಬೇರೆ ಯಾರೂ ಅಲ್ಲ, ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್. ಇವರ ಜೊತೆಗೆ ಒಬ್ಬ ಸಹಾಯಕ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ.
ರಿಷಬ್ ತಮ್ಮ ಸ್ನೇಹಿತರೊಂದಿಗೆ ಯೂರೋ ಕಪ್ ಫುಟ್ಬಾಲ್ ಪಂದ್ಯ ವೀಕ್ಷಿಸಲು ತೆರಳಿದ್ದರು. ಇದೀಗ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಅವರ ಸಂಪರ್ಕಕ್ಕೆ ಬಂದ ಇತರರಲ್ಲೂ ಸೋಂಕಿನ ಭೀತಿ ಆವರಿಸಿದೆ.