Publish Date: Mon, 22 Nov 2021 (09:56 IST)
Updated Date: Mon, 22 Nov 2021 (10:06 IST)
ಮುಂಬೈ: ವಿರಾಟ್ ಕೊಹ್ಲಿ ಪುತ್ರಿ ವಮಿಕಾಗೆ ಅತ್ಯಾಚಾರ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ಭಾರತ ಸೋತ ಬಳಿಕ ಹೈದರಾಬಾದ್ ಮೂಲದ ಟೆಕ್ಕಿ ಅಕುಬತಿನಿ ರಾಮ್ನಾಗೇಶ್ ಸಾಮಾಜಿಕ ಜಾಲತಾಣದಲ್ಲಿ ವಮಿಕಾಗೆ ಅತ್ಯಾಚಾರ ಬೆದರಿಕೆ ಹಾಕಿದ್ದ.
ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು. ಈ ಸಂಬಂಧ ಆತನಿಗೆ ಇದೀಗ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.