ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ತಂಡದ ನಾಯಕ ವಿರಾಟ್ ಕೊಹ್ಲಿ ಆಕರ್ಷಕ 13ನೇ ಶತಕ ಸಿಡಿಸಿದ್ದಾರೆ.
ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನವಾದ ಇಂದು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ ತಮ್ಮ 13ನೇ ಶತಕವನ್ನು ಪೂರೈಸಿದ್ದಾರೆ.
184 ಎಸೆತಗಳನ್ನು ಎದುರಿಸಿ ಶತಕ ದಾಖಲಿಸುವಲ್ಲಿ ಕೊಹ್ಲಿ ಯಶಸ್ವಿಯಾಗಿದ್ದಾರೆ.
ಪ್ರಸಕ್ತ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಶತಕ ದಾಖಲಿಸಿದ್ದು ಬಿಟ್ಟರೆ ಯಾರೊಬ್ಬ ಬ್ಯಾಟ್ಸ್‌ಮೆನ್ ಕೂಡಾ ಶತಕ ದಾಖಲಿಸಿಲ್ಲ. ಚೇಟೇಶ್ವರ್ ಪೂಜಾರಿಯವರ 87 ರನ್‌ಗಳ ಮೊತ್ತವೇ ಗರಿಷ್ಠವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ