Webdunia - Bharat's app for daily news and videos

Install App

ದೇಶಿ ಕ್ರಿಕೆಟ್‌ನಲ್ಲೂ ರಾಷ್ಟ್ರೀಯ ತಂಡದ ಸ್ಟಾರ್‌ಗಳು ಡುಮ್ಕಿ: ಅದೇ ಹಾಡು, ಅದೇ ರಾಗ ಎಂದ ನೆಟ್ಟಿಗರು

Sampriya
ಗುರುವಾರ, 23 ಜನವರಿ 2025 (13:02 IST)
Photo Courtesy X
ಮುಂಬೈ: ಭಾರತ ರಾಷ್ಟ್ರೀಯ ತಂಡದ ಆಟಗಾರರು ದೇಶೀಯ ಕ್ರಿಕೆಟ್‌ನಲ್ಲಿ ಆಡುವುದನ್ನು ಕಡ್ಡಾಯಗೊಳಿಸಿದ ಬೆನ್ನಲ್ಲೇ ರಣಜಿ ಟ್ರೋಫಿ ಟೂರ್ನಿಯಲ್ಲಿ ಕಣಕ್ಕೆ ಇಳಿದ ರೋಹಿತ್‌ ಶರ್ಮಾ, ರಿಷಭ್‌ ಪಂತ್‌, ಶುಭಮನ್‌ ಗಿಲ್‌ ಮತ್ತು ಯಶಸ್ವಿ ಜೈಸ್ವಾಲ್‌ ನಿರಾಸೆ ಮೂಡಿಸಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಪಂಜಾಬ್‌ ತಂಡದಲ್ಲಿ ಶುಭಮನ್‌ ಗಿಲ್‌ ಕಣಕ್ಕೆ ಇಳಿದಿದ್ದರು. ಆದರೆ, ಎಂಟು ಎಸೆತಗಳನ್ನು ಎದುರಿಸಿದ ಅವರು ಕೇವಲ 4 ರನ್‌ ಗಳಿಸಿ ಪೆವಿಲಿಯನ್‌ ಪರೇಡ್‌ ನಡೆಸಿದರು. ಪಂಜಾಬ್‌ ತಂಡವು ಕರ್ನಾಟಕದ ಬೌಲರ್‌ಗಳ ದಾಳಿಗೆ ತತ್ತರಿಸಿ 55 ರನ್‌ಗಳಿಗೆ ಆಲೌಟ್‌ ಆಗಿದೆ.

ಮುಂಬೈನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ತಂಡದ ಪರ ಕಣಕ್ಕೆ ಇಳಿದ ಭಾರತ ತಂಡದ ನಾಯಯ ರೋಹಿತ್‌ ಶರ್ಮಾ, ಯಶಸ್ವಿ ಜೈಸ್ವಾಲ್‌ ಬೇಗನೇ ಪೆವಿಲಿಯನ್‌ ಸೇರಿಕೊಂಡರು. ಆರಂಭಿಕ ಆಟಗಾರರಾಗಿ ಬ್ಯಾಟ್‌ ಹಿಡಿದ ಅವರು ತಂಡವು 12 ರನ್‌ ಗಳಿಸುವಷ್ಟರಲ್ಲಿ ಕ್ರೀಸ್‌ನಿಂದ ನಿರ್ಗಮಿಸಿದ್ದರು. ಜೈಸ್ವಾಲ್‌ 4 ರೋಹಿತ್‌ 3 ರನ್‌ ಗಳಿಸಿ ನಿರಾಸೆ ಮೂಡಿಸಿದರು. ಅಜಿಂಕ್ಯಾ ರಹಾನೆ ನೇತೃತ್ವದ ತಂಡವು 110 ರನ್‌ಗೆ 7 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದೆ.

ಭಾರತದ ಭರವಸೆಯ ಬ್ಯಾಟರ್‌, ವಿಕೆಟ್‌ಕೀಪರ್ ರಿಷಭ್‌ ಪಂತ್‌ ಅವರೂ ನಿರಾಸೆ ಮೂಡಿಸಿದರು. ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ದೆಹಲಿ ತಂಡದ ಪರ ಕಣಕ್ಕೆ ಇಳಿದ ಅವರು 10 ಎಸೆತಗಳಲ್ಲಿ ಕೇವಲ 1 ರನ್‌ ಗಳಿಸಿ ಔಟಾದರು. ದೆಹಲಿ ತಂಡವು 6 ವಿಕೆಟ್‌ಗೆ 152 ರನ್‌ ಗಳಿಸಿದೆ.

ಭಾರತದ ಸ್ಟಾರ್‌ ಬ್ಯಾಟರ್‌ಗಳು ದೇಶೀಯ ಕ್ರಿಕೆಟ್‌ನಲ್ಲಿ ವಿಫಲವಾಗಿರುವುದಕ್ಕೆ ಭಾರೀ ಟೀಕೆ ವ್ಯಕ್ತವಾಗಿದೆ. ಇಲ್ಲೂ ಅದೇ ಹಾಡು ಅದೇ ರಾಗ ಎಂದು ಛೇಡಿಸುತ್ತಿದ್ದಾರೆ.

ಭಾರತದ ಮತ್ತಿಬ್ಬರು ಬ್ಯಾಟರ್‌ಗಳಾದ ವಿರಾಟ್‌ ಕೊಹ್ಲಿ ಮತ್ತು ಕೆ.ಎಲ್‌.ರಾಹುಲ್‌ ಅವರು ರಣಜಿಯ ಮುಂದಿನ ಪಂದ್ಯಗಳಲ್ಲಿ ಕ್ರಮವಾಗಿ ದೆಹಲಿ ಮತ್ತು ಕರ್ನಾಟಕ ತಂಡವನ್ನು ಸೇರಿಕೊಳ್ಳಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments