Select Your Language

Notifications

webdunia
webdunia
webdunia
webdunia

ವಿರಾಟ್ ಪಡೆಗೆ ದಕ್ಷಿಣಾ ಆಫ್ರಿಕಾದಲ್ಲಿ 25 ವರ್ಷಗಳ ಬಳಿಕ ಐತಿಹಾಸಿಕ ಸರಣಿ ಗೆಲುವು

ವಿರಾಟ್ ಪಡೆಗೆ ದಕ್ಷಿಣಾ ಆಫ್ರಿಕಾದಲ್ಲಿ 25 ವರ್ಷಗಳ ಬಳಿಕ ಐತಿಹಾಸಿಕ ಸರಣಿ ಗೆಲುವು
ಪೋರ್ಟ್ ಎಲಿಜಬೆತ್ , ಬುಧವಾರ, 14 ಫೆಬ್ರವರಿ 2018 (06:57 IST)
ಪೋರ್ಟ್ ಎಲಿಜಬೆತ್: ದಕ್ಷಿಣ ಆಫ್ರಿಕಾ ನೆಲದಲ್ಲಿ ಮೊಟ್ಟಮೊದಲ ಬಾರಿಗೆ ಏಕದಿನ ಸರಣಿ ಗೆಲ್ಲುವ ಮೂಲಕ ಭಾರತೀಯ ತಂಡ ಇತಿಹಾಸ ಸೃಷ್ಟಿಸಿದೆ.


ಮಂಗಳವಾರ ರಾತ್ರಿ ಇಲ್ಲಿ ನಡೆದ ಸರಣಿಯ ಐದನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ತಂಡವು 73 ರನ್‌ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿತು. ಅದರೊಂದಿಗೆ ಆರು ಪಂದ್ಯಗಳ ಸರಣಿಯಲ್ಲಿ 4–1ರಿಂದ ಮುನ್ನಡೆ ಸಾಧಿಸಿತು.


ಇದರೊಂದಿಗೆ ಭಾರತದ ಸರ್ವಶ್ರೇಷ್ಠ ನಾಯಕರ ಸಾಲಿಗೆ ವಿರಾಟ್ ಕೊಹ್ಲಿ ಸೇರ್ಪಡೆಯಾಗಿದ್ದಾರೆ. ಯಾಕೆಂದರೆ ಕಳೆದ 25 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹರಿಣಗಳ ನಾಡಲ್ಲಿ ಏಕದಿನ ಸರಣಿ ಜಯಿಸಿದ್ದಾರೆ.


ಸವಾಲಿನ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 42.2 ಓವರ್‌ಗಳಲ್ಲಿ 201 ರನ್‌ ಗಳಿಸುವಷ್ಟರಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡಿತು.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟಾಸ್ ವಿಷಯದಲ್ಲಿ ಮತ್ತೆ ವಿರಾಟ್ ಕೊಹ್ಲಿ ದುರಾದೃಷ್ಟ ಮುಂದುವರಿಕೆ!