Select Your Language

Notifications

webdunia
webdunia
webdunia
webdunia

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

Whitewash for India at home: Themba Bavuma squad make new history

Sampriya

ಗುವಾಹಟಿ , ಬುಧವಾರ, 26 ನವೆಂಬರ್ 2025 (12:59 IST)
Photo Credit X
ಗುವಾಹಟಿ: ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಅಮೋಘ ಜಯ ಸಾಧಿಸಿದೆ. ಈ ಮೂಲಕ ಬರೋಬ್ಬರಿ 26 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಸರಣಿ ವಶಮಾಡಿಕೊಂಡಿದೆ.

ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ತವರಿನಲ್ಲಿ ಭಾರತ ತಂಡಕ್ಕೆ ಭಾರೀ ಮುಖಭಂಗವಾಗಿದೆ.

1999 ರಲ್ಲಿ ದಕ್ಷಿಣ ಆಫ್ರಿಕಾ ತಂಡವು ಕೊನೆಯ ಬಾರಿ ಭಾರತದಲ್ಲಿ ಸರಣಿ ಗೆದ್ದಿತ್ತು. ನಂತರದಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿಯಲು ಸಾಧ್ಯವಾಗಿರಲಿಲ್ಲ. ಇದೀಗ ಎರಡು ದಶಕಗಳ ಬಳಿಕ ಭಾರತ ತಂಡವನ್ನು ಹೀನಾಯವಾಗಿ ಸೋಲಿಸಿ ಟೆಂಬಾ ಬವುಮಾ ಪಡೆ ಹೊಸ ಇತಿಹಾಸ ನಿರ್ಮಿಸಿದೆ.

ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ 30 ರನ್​​ಗಳ ಜಯ ಸಾಧಿಸಿತ್ತು. ಇದೀಗ ಗುವಾಹಟಿಯಲ್ಲೂ ಭಾರತ ತಂಡವನ್ನು ಬಗ್ಗು ಬಡಿದಿದೆ.

ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಕೇವಲ 201 ರನ್​ಗಳು ಮಾತ್ರ. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ 288 ರನ್​ಗಳ ಹಿನ್ನಡೆ ಅನುಭವಿಸಿತು. 288 ರನ್​​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು 5 ವಿಕೆಟ್ ನಷ್ಟಕ್ಕೆ 260 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು. ಈ ಮೂಲಕ ಭಾರತ ತಂಡಕ್ಕೆ ಕೊನೆಯ ಇನಿಂಗ್ಸ್​ನಲ್ಲಿ 549 ರನ್​ಗಳ ಕಠಿಣ ಗುರಿ ನೀಡಿದ್ದರು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 40 ರನ್​ಗಳಿಗೆ ಆಲೌಟ್ ಆಗುವ ಮೂಲಕ 408 ರನ್​​ಗಳಿಂದ ಸೋಲೊಪ್ಪಿಕೊಂಡಿದೆ. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡ ತವರಿನಲ್ಲಿ ಅನುಭವಿಸುತ್ತಿರುವ ಮೂರನೇ ವೈಟ್ ವಾಶ್. 

Share this Story:

Follow Webdunia kannada

ಮುಂದಿನ ಸುದ್ದಿ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video