Publish Date: Thu, 13 Oct 2022 (08:30 IST)
Updated Date: Thu, 13 Oct 2022 (09:00 IST)
ಪರ್ತ್: ಟಿ20 ವಿಶ್ವಕಪ್ ಆಡಲಿರುವ ಭಾರತ ತಂಡಕ್ಕೆ ಮೂವರು ಹೊಸ ಆಟಗಾರರು ಸೇರ್ಪಡೆಯಾಗಿದ್ದಾರೆ.
ದ.ಆಫ್ರಿಕಾ ವಿರುದ್ಧದ ಸರಣಿಯ ಭಾಗವಾಗಿದ್ದ ಶ್ರಾದ್ಧೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಜೊತೆಗೆ ಮೊಹಮ್ಮದ್ ಶಮಿ ಟೀಂ ಇಂಡಿಯಾವನ್ನು ಕೂಡಿಕೊಂಡಿದ್ದಾರೆ.
ಈ ಮೂವರು ಮೀಸಲು ಆಟಗಾರರಾಗಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಆದರೆ ಅನುಭವಿ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಶಮಿ ಅಧಿಕೃತವಾಗಿ ತಂಡದ ಭಾಗವಾಗುವ ಸಾಧ‍್ಯತೆಯಿದೆ ಎನ್ನಲಾಗಿದೆ.
-Edited by Rajesh Patil