ಮೆಲ್ಬರ್ನ್: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರಿಗೆ ಗೌರವಾರ್ಥವಾಗಿ ಭಾರತ ಕ್ರಿಕೆಟ್ ತಂಡದ ಆಟಗಾರರು ಇಲ್ಲಿ ನಡೆಯುತ್ತಿರುವ ಪಂದ್ಯದ ವೇಳೆ ತೋಳಿಗೆ ಕಪ್ಪು ಪಟ್ಟಿ ಧರಿಸಿ ಆಡಿದರು.
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತೀಯ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಕಟ್ಟಿ ಮೈದಾನಕ್ಕಿಳಿದರು.
ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಗೌರವಾರ್ಥವಾಗಿ ಭಾರತ ತಂಡದ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
92 ವರ್ಷದ ಮನಮೋಹನ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯಸಿರೆಳೆದರು. ಭಾರತ ಆರ್ಥಿಕತೆಯಲ್ಲಿ ಅಪೂರ್ವ ಬದಲಾವಣೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ.