ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಯಶ್ ದಯಾಳ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಈ ಆರೋಪವು ಅವರ ವೃತ್ತಿಭವಿಷ್ಯಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆಯಿದೆ.
ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಈ ಸಂಬಂಧ ಉತ್ತರ ಪ್ರದೇಶದ ಗಾಝಿಯಾಬಾದ್ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಎಫ್ಐಆರ್ ದಾಖಲಾಗಿರುವ ಕಾರಣ ಯಶ್ ದಯಾಳ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.
ಮದುವೆಯ ಆಮಿಷವೊಡ್ಡಿ ಯಶ್ ದಯಾಳ್ ಅವರು ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಇತ್ತೀಚೆಗಷ್ಟೇ ಯುವತಿಯೊಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದರು. ಅಷ್ಟೇ ಅಲ್ಲದೆ ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪತ್ರ ಬರೆದಿದ್ದರು. ಸಿಎಂ ಕಚೇರಿ ಸೂಚನೆ ಮೇರೆಗೆ ಪೊಲೀಸರು ದಯಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ದಯಾಳ್ ಅವರ ಮಾಜಿ ಪ್ರಿಯತಮೆ ಎನ್ನಲಾದ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾರೆ. ದಯಾಳ್ ಮತ್ತು ನಾನು ಕಳೆದ ಐದು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದೇವು. ಈ ಅವಧಿಯಲ್ಲಿ ದಯಾಳ್, ನನ್ನನ್ನು ಲೈಂಗಿಕವಾಗಿ ಬಳಸಿಕೊಂಡು, ಈಗ ದೂರ ಮಾಡಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.
ಯುವತಿಯ ಹೇಳಿಕೆಯನ್ನು ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದ ಪೊಲೀಸರು, ಇದೀಗ ದಯಾಳ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದರಿಂದ ದಯಾಳ್‌ಗೆ ಬಂಧನದ ಭೀತಿ ಎದುರಾಗಿದೆ. ಯಾವುದೇ ಕ್ಷಣದಲ್ಲಾದರೂ ಆರ್‌ಸಿಬಿ ಸ್ಟಾರ್ ಯಶ್, ಬಂಧನ ಆಗಬಹುದು.
ಲೈಂಗಿನ ದೌರ್ಜನ್ಯದಂತಹ ಗಂಭೀರ ಪ್ರಕರಣವನ್ನು ಎದುರಿಸುತ್ತಿರುವ ಆಟಗಾರನನ್ನು ಐಪಿಎಲ್ 2026ರ ಮಿನಿ ಹರಾಜಿಗೂ ಮುನ್ನ ಆರ್‌ಸಿಬಿ ತಂಡದಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ.