ನವದೆಹಲಿ: ಎಸೆಕ್ಸ್ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದು ಎರಡೂ ಇನಿಂಗ್ಸ್ ಗಳಲ್ಲಿ ಶೂನ್ಯಕ್ಕೆ ಔಟಾದ ಬಳಿಕ ಶಿಖರ್ ಧವನ್ ಮೇಲೆ ಅಭಿಮಾನಿಗಳ ಆಕ್ರೋಶ ಹೆಚ್ಚಾಗಿದೆ.
									
			
			 
 			
 
 			
					
			        							
								
																	ಇಂಗ್ಲೆಂಡ್ ಬಂದಾಗಿನಿಂದ ಒಂದೇ ಒಂದು ಉತ್ತಮ ಇನಿಂಗ್ಸ್ ಆಡದ ಧವನ್ ಕಳಪೆ ಫಾರ್ಮ್ ಬಗ್ಗೆ ಟ್ವಿಟರಿಗರು ಹಿಗ್ಗಾ ಮುಗ್ಗಾ ಜಾಡಿಸುತ್ತಿದ್ದಾರೆ. ಪದೇ ಪದೇ ವಿಫಲರಾದರೂ ಕೊಹ್ಲಿ, ಕೋಚ್ ರವಿಶಾಸ್ತ್ರಿ ಧವನ್ ಗೇ ಪ್ರಾಶಸ್ತ್ಯ ನೀಡುತ್ತಿರುವುದೇಕೆ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
									
										
								
																	ಹೀಗಾಗಿ ಧವನ್ ಬದಲಿಗೆ ರೋಹಿತ್ ಶರ್ಮಾರನ್ನು ತಂಡಕ್ಕೆ ಸೇರಿಸಿಕೊಳ್ಳಿ ಎಂದು ಕೆಲವರು ಸಲಹೆ ಕೊಟ್ಟಿದ್ದಾರೆ. ಇನ್ನು ಕೆಲವರು ಧವನ್ ರನ್ನು ಕಿತ್ತು ಹಾಕಿ ಕೆಎಲ್ ರಾಹುಲ್ ರನ್ನೇ ಆರಂಭಿಕರಾಗಿ ಕಣಕ್ಕಿಳಿಸಿ ಎಂದು ಆಗ್ರಹಿಸಿದ್ದಾರೆ.
									
											
							                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.