ಶಾರ್ಜಾ: ಐಪಿಎಲ್‌ನಲ್ಲಿ ಕೋಟಿ ಮೌಲ್ಯ ಪಡೆದ 13 ವರ್ಷ ವಯಸ್ಸಿನ ವೈಭವ್ ಸೂರ್ಯವಂಶಿ ಅವರು ಬುಧವಾರ 19 ವರ್ಷದೊಳಗಿನವರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದಲ್ಲಿ ಸಿಕ್ಸರ್‌ಗಳ ಮಳೆಗರೆದು ತಂಡವನ್ನು ಫೈನಲ್‌ಗೆ ತಲುಪಿಸಿದ್ದಾರೆ.
ಸೂರ್ಯವಂಶಿ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ಯುಎಇ ವಿರುದ್ಧ 10 ವಿಕೆಟ್ ಅಮೋಘ ಜಯ ದಾಖಲಿಸಿದೆ. ಸೆಮಿಫೈನಲ್‌ನಲ್ಲಿ ಭಾರತವು ಶ್ರೀಲಂಕಾವನ್ನು ಎದುರಿಸಲಿದೆ. ಎ ಗುಂಪಿನಲ್ಲಿರುವ ಭಾರತ ಎರಡನೇ ಸ್ಥಾನದೊಂದಿಗೆ ಸೆಮಿಗೆ ಮುನ್ನಡೆದಿದೆ. ಪಾಕಿಸ್ತಾನ ಅಗ್ರಸ್ಥಾನ ಪಡೆದಿದೆ.
ಮೊದಲು ಬ್ಯಾಟ್ ಮಾಡಿದ ಯುಎಇ 44 ಓವರ್‌ಗಳಲ್ಲಿ 137 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ 16.1 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 143 ರನ್ ಗಳಿಸಿ ಭರ್ಜರಿ ಜಯ ದಾಖಲಿಸಿತು.
ಭಾರತದ ಪರ ಯುಧಾಜಿತ್ ಗುಹಾ 15 ರನ್ ನೀಡಿ 3 ವಿಕೆಟ್ ಕಬಳಿಸಿದರು. ಇನ್ನು ಚೇತನ್ ಶರ್ಮಾ ಹಾಗೂ ಕರ್ನಾಟಕದ ಯುವ ಆಟಗಾರ ಹಾರ್ದಿಕ್ ರಾಜ್ ತಲಾ ಎರಡು ವಿಕೆಟ್ ಪಡೆದರು.
ಭರ್ಜರಿ ಆರಂಭ
ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾದ ಆರಂಭ ಭರ್ಜರಿಯಾಗಿತ್ತು. ಟೀಮ್ ಇಂಡಿಯಾದ ಆರಂಭಿಕರಾದ ಆಯುಷ್ ಮಾತ್ರೆ ಹಾಗೂ ವೈಭವ್ ಸೂರ್ಯವಂಶಿ ಅಮೋಘ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ತಂಡಕ್ಕೆ ಅಗತ್ಯ ಇದ್ದ ರನ್‌ಗಳನ್ನು ಕಲೆ ಹಾಕಿ ಅಬ್ಬರಿಸಿತು. ಗೆಲುವಿಗೆ ಅಗತ್ಯ ರನ್‌ಗಳನ್ನು ರನ್‌ಗಳನ್ನು ಕಲೆ ಹಾಕಿ ಅಬ್ಬರಿಸಿತು. ಈ ಜೋಡಿ 16.1 ಓವರ್‌ಗಳಲ್ಲಿ 143 ರನ್ ಸಿಡಿಸಿ ಗೆಲುವು ದಾಖಲಿಸಿತು.
ಆರಂಭಿಕರಾದ ಆಯುಷ್ ಹಾಗೂ ವೈಭವ್ ಭರ್ಜರಿ ಅರ್ಧಶತಕ ಬಾರಿಸಿ ಮಿಂಚಿದರು. ಆಯುಷ್ 4 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 67 ರನ್ ಸಿಡಿಸಿದರು. ಇನ್ನು ವೈಭವ್ ಸೂರ್ಯವಂಶಿ 3 ಬೌಂಡರಿ, 6 ಸಿಕ್ಸರ್ ಸಹಾಯದಿಂದ ಅಜೇಯ 76 ರನ್ ಸಿಡಿಸಿದರು.
13 ವರ್ಷದ ಸೂರ್ಯವಂಶಿಯನ್ನು ಐಪಿಎಲ್ ಬಿಡ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವು 1.10 ಕೋಟಿ ನೀಡಿ ಖರೀದಿಸಿದೆ. ಈ ಮೂಲಕ ಐಪಿಎಲ್ ತಂಡಕ್ಕೆ ಆಯ್ಕೆಯಾದ ಅತಿ ಕಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.