Select Your Language

Notifications

webdunia
webdunia
webdunia
webdunia

ಕ್ರಿಕೆಟಿಗ ಉಮೇಶ್ ಯಾದವ್ ತಂದೆ ಸಾವು

ಉಮೇಶ್ ಯಾದವ್
Photo Courtesy: Twitter
ಮುಂಬೈ: ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ತಂದೆ ತಿಲಕ್ ಯಾದವ್ ಅನಾರೋಗ್ಯದಿಂದಾಗಿ ಸಾವನ್ನಪ್ಪಿದ್ದಾರೆ.

ಅವರಿಗೆ 74 ವರ್ಷ ವಯಸ್ಸಾಗಿತ್ತು. ಬಹಳ ದಿನಗಳಿಂದ ಅವರು ಅನಾರೋಗ್ಯಕ್ಕೊಳಗಾಗಿದ್ದರು. ನಾಗ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಉಮೇಶ್ ಯಾದವ್ ಅಲ್ಲದೆ ಅವರಿಗೆ ಮೂವರು ಮಕ್ಕಳಿದ್ದಾರೆ. ತಂದೆಯ ಸಾವಿನ ಬಗ್ಗೆ ಉಮೇಶ್ ಯಾದವ್ ಟ್ವಿಟರ್ ನಲ್ಲಿ ದುಃಖ ಹಂಚಿಕೊಂಡಿದ್ದಾರೆ. ಉಮೇಶ್ ಸದ್ಯಕ್ಕೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಭಾಗವಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿ ರನೌಟ್, ಹರ್ಮನ್ ಪ್ರೀತ್ ಕೌರ್ ರನೌಟ್ ನಡುವೆ ಹೋಲಿಕೆ ಮಾಡಿದ ನೆಟ್ಟಿಗರು