ಮುಂಬೈ: ಇಂಗ್ಲೆಂಡ್ ವಿರುದ್ಧ ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಘೋಷಣೆಯಾಗಿದ್ದು, ವೇಗಿ ಉಮೇಶ್ ಯಾದವ್ ಮರಳಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಆದರೆ ಅದಕ್ಕೆ ಮೊದಲು ಅವರು ಫಿಟ್ನೆಸ್ ಪರೀಕ್ಷೆ ಪಾಸಾಗಬೇಕಿದೆ. ಆಸ್ಟ್ರೇಲಿಯಾ ಸರಣಿಯಲ್ಲಿ ಗಾಯಗೊಂಡು ತವರಿಗೆ ಮರಳಿದ್ದ ಉಮೇಶ್ ಈಗ ಚೇತರಿಸಿಕೊಂಡಿದ್ದು, ಮೂರನೇ ಟೆಸ್ಟ್ ಪಂದ್ಯಕ್ಕೆ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹಾಗಿದ್ದರೂ ಅವರು ಫಿಟ್ನೆಸ್ ಸಾಬೀತುಪಡಿಸಬೇಕಿದೆ. ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾದರೆ ಶ್ರಾದ್ಧೂಲ್ ಠಾಕೂರ್ ಸ್ಥಾನಕ್ಕೆ ತಂಡಕ್ಕೆ ಆಯ್ಕೆಯಾಗಲಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!