ಭಾರತ ತಂಡಕ್ಕೆ ಉಪನಾಯಕನಾಗಿ ಆಯ್ಕೆಯಾಗಿರುವ ಬಗ್ಗೆ ಸಂತಸವಿದ್ದರೂ ಅದೊಂದು ಸವಾಲಿನ ಮತ್ತು ತಂಡದ ಜವಾಬ್ದಾರಿಯ ಹೊಣೆಯಾಗಿದೆ ಎಂದು ಅಜಿಂಕ್ಯ ರೆಹಾನೆ ಹೇಳಿದ್ದಾರೆ.
ಕಳೆದ 2011 ರಲ್ಲಿ ಭಾರತ ತಂಡಕ್ಕೆ ಸೇರ್ಪಡೆಗೊಂಡು ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ರೆಹಾನೆ, ಇದೀಗ ಭಾರತ ಕ್ರಿಕೆಟ್ ತಂಡದ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.
2013ರಲ್ಲಿ ಟೆಸ್ಟ್ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 7 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವ ಒಂದು ರನ್‌ಗಳಿಸಿದ್ದ ರೆಹಾನೆಗೆ ಆರಂಭ ತುಂಬಾ ಕಷ್ಟದಾಯಕವಾಗಿತ್ತು. ತದ ನಂತರ ಉತ್ತಮ ಫಾರ್ಮ್‌ಗೆ ಮರಳಿದ ರೆಹಾನೆ ತಂಡಕ್ಕೆ ಹೊಸ ಶಕ್ತಿಯಾಗಿ ಹೊರಹೊಮ್ಮಿದ್ದಾರೆ.
ಅಂಜಿಕ್ಯ ರೆಹಾನೆ, ನ್ಯೂಜಿಲೆಂಡ್, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ, ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.