ಮುಂಬೈ: ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿಗೆ ಶ್ರೀಲಂಕಾ ವಿರುದ್ಧ ಮೊಹಾಲಿಯಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯ ವಿಶೇಷವಾಗಿದೆ.
ಈ ಪಂದ್ಯ ಕೊಹ್ಲಿ ಪಾಲಿಗೆ 100 ನೇ ಟೆಸ್ಟ್ ಪಂದ್ಯವಾಗಿದೆ. ಈ ಮೊದಲು ಈ ಪಂದ್ಯವನ್ನು ಕೊಹ್ಲಿಗೆ ಎರಡನೇ ತವರು ಬೆಂಗಳೂರಿನಲ್ಲಿ ಆಡುವ ಅವಕಾಶ ಸಿಗಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಬಿಸಿಸಿಐ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಮೊದಲ ಟೆಸ್ಟ್ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ.
ಆದರೆ ಮೊಹಾಲಿಯಲ್ಲಿ ಪ್ರೇಕ್ಷಕರಿಲ್ಲದೇ ಪಂದ್ಯ ನಡೆಯಲಿದೆ. ಹೀಗಾಗಿ ಕೊಹ್ಲಿ ಐತಿಹಾಸಿಕ ಟೆಸ್ಟ್ ಪಂದ್ಯವನ್ನು ಖಾಲಿ ಮೈದಾನದಲ್ಲಿ ಆಡಬೇಕಿದೆ.