Publish Date: Sat, 04 Mar 2023 (09:20 IST)
Updated Date: Sat, 04 Mar 2023 (09:32 IST)
ಇಂಧೋರ್: ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಉಜ್ಜೈನಿ ಮಹಾಕಾಳೇಶ್ವರನ ದರ್ಶನ ಪಡೆದಿದ್ದಾರೆ.
ಪತ್ನಿ ಅನುಷ್ಕಾ ಶರ್ಮಾ ಜೊತೆ ಉಜ್ಜೈನಿಗೆ ಭೇಟಿ ನೀಡಿರುವ ಕೊಹ್ಲಿ ಮಹಾಕಾಳನಿಗೆ ಪೂಜೆ ಸಲ್ಲಿಸಿದ್ದಾರೆ. ಕಚ್ಚೆ, ಪಂಚೆ ಸಾಂಪ್ರದಾಯಿಕ ಉಡುಗೆಯಲ್ಲಿ ಕೊಹ್ಲಿ ಪೂಜೆ ಸಲ್ಲಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಕೊಹ್ಲಿ ರನ್ ಬರಗಾಲ ಎದುರಿಸುತ್ತಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಅವರು ಪದೇ ಪದೇ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.
ಮೊನ್ನೆಯಷ್ಟೇ ಕ್ರಿಕೆಟಿಗ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ದಂಪತಿ ಸಮೇತ ಮಹಾಕಾಳೇಶ್ವರನ ಸನ್ನಿಧಿಗೆ ಬಂದು ಪೂಜೆ ಸಲ್ಲಿಸಿದ್ದರು. ಈಗ ಕೊಹ್ಲಿ ದಂಪತಿ ಸರದಿ.